ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯ: ಮುಂದಿನ ಕ್ರಮವೇನು?

0
Spread the love

ಬೆಂಗಳೂರು:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ.

Advertisement

ಕಳೆದ ಜನವರಿ 8 ರಂದು 6 ಮಂದಿ ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರು ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ವಿದಾಯ ಹೇಳಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾಗಿದ್ದರು.

ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಆ 6 ನಕ್ಸಲರ ಪೊಲೀಸ್ ಕಸ್ಟಡಿ ಅವಧಿ ನಾಳೆಗೆ ಅಂತ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಎನ್​ಐಎ ಕೋರ್ಟ್​ಗೆ ನಕ್ಸಲರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.

ನಾಳೆ ಕೇರಳ ಪೊಲೀಸರು ಆ ನಕ್ಸಲರನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಎನ್​ಐಎ ಅಧಿಕಾರಿಗಳು ಕೂಡ 6 ನಕ್ಸಲರ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here