ಹುಬ್ಬಳ್ಳಿಯಲ್ಲಿ ಸದ್ದು ಮಾಡಿದ ಪೊಲೀಸ್ ಬಂದೂಕು: ಅಂತರರಾಜ್ಯ ದರೋಡೆಕೋರರ ಕಾಲಿಗೆ ಗುಂಡೇಟು!

0
Spread the love

ಹುಬ್ಬಳ್ಳಿ:- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಇತ್ತೀಚೆಗೆ ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ಖದೀಮರಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡೇಟು ನೀಡಿದ್ದಾರೆ.

Advertisement

ಗುಂಡೇಟಿಗೆ ಒಳಗಾದವರನ್ನು ಇರ್ಷಾದ್ ಹಾಗೂ ಅಕ್ಬರ್ ಎಂದು ಗುರುತಿಸಲಾಗಿದೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.

ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here