ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಆಡುಗೋಡಿಯಲ್ಲಿ ಶಿಥಿಲಗೊಂಡ ಕಟ್ಟಡದಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್‌ಟೇಬಲ್ ರನ್ನು ಮುಬಾರಕ್ ಸಿಕಿಂಧರ್ ಎಂದು ಗುರುತಿಸಲಾಗಿದೆ. ಕಳೆದ 15 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ವಾಸನೆ ಬಂದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮುಬಾರಕ್ ಸಿಕಿಂದರ್ ಕಳೆದ ಏಳು ವರ್ಷಗಳಿಂದ ಸಿಎಆರ್ ದಕ್ಷಿಣದಲ್ಲಿ ಕೆಲಸ ಮಾಡಿಕೊಂಡಿದ್ದರು. ಮೂರು ವರ್ಷಗಳ ಹಿಂದೆ ಮದುವೆ ಕೂಡ ಮಾಡಿಕೊಂಡಿದ್ದರು.
ಫೆಬ್ರವರಿ 9ರಂದು ಆಡುಗೊಡಿ ಪೊಲೀಸ್ ಠಾಣೆಯಲ್ಲಿ ಮುಬಾರಕ್ ಮಿಸ್ಸಿಂಗ್ ಆಗಿದ್ದರು. ಸಹ ಸಿಬ್ಬಂದಿಯಿಂದ ಮಿಸ್ಸಿಂಗ್ ಕಂಪ್ಲೆಂಟ್ ದಾಖಲು ಮಾಡಲಾಗಿತ್ತು. ಸದ್ಯ ಘಟನಾ ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



