ಧಾರವಾಡ:- ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರು ಕಾರಲ್ಲೇ ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ಜರುಗಿದೆ.
ಪಂಚಾಕ್ಷರಯ್ಯ ಸಾಲಿಮಠ ಸಜೀವ ದಹನಗೊಂಡ ಪೊಲೀಸ್ ಇನ್ಸ್‌ಪೆಕ್ಟರ್. ಇವರು ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿ ಗದಗಿಗೆ ಹೋಗುವ ಸಮಯದಲ್ಲಿ ದುರ್ಘಟನೆ ನಡೆದಿದೆ. ಇವರು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಆಗಿದ್ದರು. 2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಗದಗ ನಗರ ಠಾಣೆಯಲ್ಲಿ 2020ರಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ.
ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



