ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ರಸ್ತೆಯಲ್ಲಿ ರೀಲ್ಸ್ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೆ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪೋಲಿಸರು ಎಫ್ಐಆರ್ ದಾಖಲಿಸಿಕೊಂಡಿದ್ದು ಇದೀಗ ಇಬ್ಬರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ವಿನಯ್ ಗೌಡ ಹಾಗೂ ರಜತ್ ಅವರನ್ನು ಬಸವೇಶ್ವರ ನಗರ ಪೊಲೀಸರು ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಶೂಟಿಂಗ್ನಲ್ಲಿ ಹೊರಗಡೆ ಇರೋ ಕಾರಣ ರಜತ್ ಅವರು ಸಮಯವಕಾಶ ಕೇಳಿದ್ದಾರೆ. ವಿನಯ್ ಗೌಡ ಇಂದು ವಿಚಾರಣೆಗೆ ಹಾಜರಾಗೋದಾಗಿ ಪೊಲೀಸರಿಗೆ ತಿಳಿಸಿದ್ದಾರೆ.
ವಿಡಿಯೋ ಕುರಿತು ಎಫ್ ಐ ಆರ್ ದಾಖಲಾಗಿದ್ರು ಇದುವರೆಗೂ ರಜತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ವಿಡಿಯೋವನ್ನು ಡಿಲೀಟ್ ಮಾಡಿಲ್ಲ.