ವಿಜಯಸಾಕ್ಷಿ ಸುದ್ದಿ, ಗದಗ/ ಬೆಂಗಳೂರು
ದಕ್ಷ ಹಾಗೂ ಪ್ರಾಮಾಣಿಕವಾಗಿ ಸಲ್ಲಿಸಿದ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು
ಪೊಲೀಸರಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಘೋಷಣೆ ಮಾಡಿದೆ.

ಶನಿವಾರ ರಾಜ್ಯ ಸರಕಾರ ಹೊರಡಿಸಿದ ಪ್ರಕಟಣೆಯಲ್ಲಿ ಐಪಿಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 197 ಸಿಬ್ಬಂದಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ 2024 ರ ಮುಖ್ಯಮಂತ್ರಿಗಳ ಪದಕ ಲಭಿಸಿದೆ.

ಜಿಲ್ಲೆಯ ಮುಂಡರಗಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸಗಲ್, ಗದಗ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಲ್ ಕೆ ಜೂಲಕಟ್ಟಿ ಅವರಿಗೆ ಮುಖ್ಯಮಂತ್ರಿಗಳ ಪದಕ ಘೋಷಿಸಲಾಗಿದೆ.

ಸಿಬ್ಬಂದಿಗಳಾದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಎಚ್‌ಸಿ ಹನಮಂತಗೌಡ ಮರಿಗೌಡ, ಇಂಟಲಿಜೆನ್ಸ್ ಗದಗ ಜಿಲ್ಲಾ ಘಟಕದ ಹಿರಿಯ ಗುಪ್ತಚರ ಸಹಾಯಕ ಶಿದ್ದರಡ್ಡಿ ಎಸ್ ಕಪ್ಪತ್ತನವರ್ ಹಾಗೂ ಶಹರ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರವೀಣ್ ಕಲ್ಲೂರ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರಕಿದೆ.

ಇದೇ ಮೊದಲ ಬಾರಿಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಸಿಬ್ಬಂದಿಗಳಿಗೆ ಸಿಎಂ ಪದಕ ದೊರಕಿದ್ದು ಗದಗ ಜಿಲ್ಲೆಗೆ ಹೆಮ್ಮೆ ತರಿಸಿದ್ದು, ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಮ್ ಬಿ ಸಂಕದ, ಸೇರಿದಂತೆ ಸಹ ಸಿಬ್ಬಂದಿ, ಸಾರ್ವಜನಿಕರು ಮೆಚ್ಚುಗೆ ಹಾಗೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
