ಬೆಂಗಳೂರು: ಡ್ರಗ್ ಪೆಡ್ಲಿಂಗ್ ನಡೆಸುತ್ತಿದ್ದ ವಿದೇಶಿ ಫುಟ್ಬಾಲ್ ಆಟಗಾರನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಸೌತ್ ಆಫ್ರಿಕಾ ಮೂಲದ ಕೊರ್ಲಿ ಡೇನಿಯಲ್ ಬಂಧಿತನಾಗಿದ್ದು, ಸ್ಪೋರ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಆಗಾಗ ಕೇರಳದಲ್ಲಿ ನಡೆಯುವ ಫುಟ್ಬಾಲ್ ಪಂದ್ಯಗಳಲ್ಲಿ ಭಾಗವಹಿಸುತ್ತಿದ್ದನು ಎನ್ನಲಾಗಿದೆ. ಆದರೆ ಜೀವನೋಪಾಯಕ್ಕಾಗಿ ಡ್ರಗ್ ಪೆಡ್ಲಿಂಗ್ಗೆ ತೊಡಗಿದ್ದನೆಂಬ ಆರೋಪ ಕೇಳಿಬಂದಿದೆ.
ಬಂಧಿತನಿಂದ ಸುಮಾರು 4 ಲಕ್ಷ 48 ಸಾವಿರ ರೂಪಾಯಿ ಮೌಲ್ಯದ 56 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಗೋವಿಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



