ಮ್ಯಾಂಗೋ ಹೋಟೆಲ್ ಮೇಲೆ ಪೊಲೀಸರ ದಾಳಿ: 26 ಜನ ಅಂದರ್!

0
Spread the love

ದಾವಣಗೆರೆ:- ಅಂದರ್- ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 26 ಜನರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ದಾವಣಗೆರೆ ನಗರದ ಡೆಂಟಲ್ ಕಾಲೇಜು ರಸ್ತೆಯ ಮ್ಯಾಂಗೋ ಹೋಟೆಲ್ ನಲ್ಲಿ ಜರುಗಿದೆ.

Advertisement

ಹೋಟೆಲ್‍ನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಅಂದರ್ ಬಾಹರ್ ಅಡ್ಡೆಯ ಮೇಲೆ ನಡೆದ ದಾಳಿಯಲ್ಲಿ 26 ಮಂದಿಯನ್ನು ವಶಕ್ಕೆ ಪಡೆದಿದ್ದು, ಅಡ್ಡೆಯಲ್ಲಿದ್ದ 24,86,500 ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಎಸ್‍ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ ಸಂತೋಷ ಹಾಗೂ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜೀಕರ್ ನೇತೃತ್ವದಲ್ಲಿ ಪಿಎಸ್ಐ ಸುನೀಲ್ ತೇಲಿ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದರು

ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೆಪಿ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here