ಕಲಬುರಗಿ: ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನುಮಟ್ಟ ಹಾಕಲು ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
Advertisement
ಹೌದು ಕಮಿಷನರರೇಟ್ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ನಿದ್ದೆಗಣ್ಣಲ್ಲಿದ್ದ ರೌಡಿ ಶೀಟರ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನೂರಕ್ಕೂ ಅಧಿಕ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಕಾನೂನು ಸುವ್ಯವಸ್ಥೆ ಹದಗೆಡದಂತೆ ಹಾಗು ರೌಡಿ ಚಟುವಟಿಕೆಯಲ್ಲಿ ಭಾಗವಹಿಸಿದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.