ದೇವನಹಳ್ಳಿ:– ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ಜರುಗಿದೆ.
ಸುಮಾರು 50 ವರ್ಷದ ಅಪರಿಚಿತ ಮಹಿಳೆಯ ಶವ ಇದಾಗಿದ್ದು, ಇಂದು ಬೆಳಗ್ಗೆ ನೀರಿನಲ್ಲಿ ತೇಲುತ್ತಿದ್ದದ್ದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಶವ ಹೊರಕ್ಕೆ ತೆಗೆದು ಪರಿಶೀಲನೆ ಮಾಡಿದ್ದಾರೆ. ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಜಯಪುರ ಪಟ್ಟಣದ ಸರ್ಕಾರಿ ಆಸ್ವತ್ರೆ ಶವಾಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



