ಕಲಬುರಗಿ: ಬಿಜೆಪಿಯವರಿಗೆ ಮಾಡೋಕೆ ಬೇರೆ ಕೆಲಸವಿಲ್ಲ, ಅದಕ್ಕಾಗಿ ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ನಾಗಮಂಗಲ ಕೇಸ್ ನಲ್ಲಿ ಬಿಜೆಪಿ ನಾಯಕರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ.
Advertisement
ಯಾರೇ ಬೆಂಕಿ ಹಚ್ಚುವ ಕೆಲಸ ಮಾಡಿದರೂ ಕ್ರಮಕೈಗೊಳ್ಳಬೇಕು. ರಾಜಕಾರಣಿಗಳು ಬೆಂಕಿ ಹಚ್ಚುವ ಕೆಲಸ ಮಾಡಬಾರದು. ಜಾತಿ ಧರ್ಮ ಬಿಟ್ಟು ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಅವರು ಹೇಳಿದರು.
ಇನ್ನೂ ಸಿಎಂ ರಾಜೀನಾಮೆ ನೀಡುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ವಿಜಯೇಂದ್ರರಂತಹ ನೂರು ಜನ ಬಂದರೂ ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಅವರಂಥ ಇನ್ನೂರು ಜನ ಬಂದರೂ ಏನೂ ಆಗಲ್ಲ. ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ ಎಂದರು.