ಮಡಿಕೇರಿ:- ಇಲ್ಲಿನ ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದು, ಎರಡು ದಿನದ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರೋದು ಆತಂಕಕ್ಕೆ ಕಾರಣವಾಗಿದೆ.
ಹಳ್ಳಿಗಟ್ಟುವಿನ CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇತ್ತೀಚೆಗೆ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಪಿರಿಯಾಪಟ್ಟಣ ಮೂಲದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರೋದು ಆತಂಕಕ್ಕೆ ಕಾರಣವಾಗಿದೆ.



