ಟೀಮ್ ಇಂಡಿಯಾದ ಕ್ಯಾಪ್ಟನ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ವಿಶ್ವ ದಾಖಲೆ ಬರೆದಿದ್ದಾರೆ.
2025ರ IPL ಪಂದ್ಯದಲ್ಲಿ ಮುಂಬೈ ಪರ ರೋಹಿತ್ ಶರ್ಮಾ ಅವರು ಕಳಪೆ ಬ್ಯಾಟಿಂಗ್ ಮುಂದುವರಿಸಿದ್ದು, ಆದರೂ ವಿಶ್ವದಾಖಲೆ ಬರೆದಿದ್ದಾರೆ. ಎಸ್, ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹಿಟ್ಮ್ಯಾನ್ ಕೇವಲ 8 ರನ್ಗಳಿಸಿ ಔಟಾಗಿದ್ದರು. ಇದಾಗ್ಯೂ ಈ ಪಂದ್ಯದ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಅಹದಾಬಾದ್ನಲ್ಲಿ ನಡೆದ ಐಪಿಎಲ್ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ 450 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ಮೊದಲ ಭಾರತೀಯ ಹಾಗೂ ವಿಶ್ವದ 12ನೇ ಆಟಗಾರ ಎನಿಸಿಕೊಂಡಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ, ಡೆಕ್ಕನ್ ಚಾರ್ಜಸ್ ಹಾಗೂ ಮುಂಬೈ ಇಂಡಿಯನ್ಸ್ ಪರ 450 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಈವರೆಗೆ 11838 ರನ್ ಕಲೆಹಾಕಿದ್ದಾರೆ. ಈ ವೇಳೆ ಹಿಟ್ಮ್ಯಾನ್ ಬ್ಯಾಟ್ನಿಂದ 8 ಶತಕ ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 450 ಪಂದ್ಯಗಳನ್ನಾಡಿ 11 ಸಾವಿರ ರನ್ ಕಲೆಹಾಕಿದ ಭಾರತದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.