ವ್ಯಾಟಿಕನ್ ಸಿಟಿ: ಕಳೆದ ಕೆಲವು ದಿನಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದ ಕ್ಯಾಥೋಲಿಕ್ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಇಹಲೋಕ ತ್ಯಜಿಸಿದ್ದಾರೆ. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಪೋಪ್ ಫ್ರಾನ್ಸಿಸ್ ಚಿಕ್ಕವರಿದ್ದಾಗ ಕಂಡುಬಂದ ಸೋಂಕಿನಿಂದಾಗಿ ಅವರ ಶ್ವಾಸಕೋಶವೊಂದನ್ನು ತೆಗೆದುಹಾಕಬೇಕಾಯಿತು. ಇದರಿಂದಾಗಿ ಅವರು ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದರು. 2023 ರಲ್ಲಿಯೂ ಸಹ, ಶ್ವಾಸಕೋಶದ ಸೋಂಕಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.



