Homecinemaಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ವಿಧಿವಶ!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ವಿಧಿವಶ!

For Dai;y Updates Join Our whatsapp Group

Spread the love

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ವಿಧಿವಶರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ನಿನ್ನೆ ಸಂಜೆ ಅಡ್ಯಾರ್‌ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಲ್ಲದ ಮಧನ್ ಬಾಬು ಅವರು 71ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ನಟನ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.

1984ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟ ಮಧನ್‌ ಬಾಬ್‌, ಕಮಲ್ ಹಾಸನ್, ರಜನಿಕಾಂತ್, ಅಜಿತ್ ಕುಮಾರ್‌, ಸೂರ್ಯ ಮತ್ತು ವಿಜಯ್ ಅವರಂತಹ ಸ್ಟಾರ್‌ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಹಾಸ್ಯ, ಖಳನಾಯಕ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ನಟಿಸಿ ಜನರನ್ನ ರಂಜಿಸಿದ್ದರು.

ಚಲನಚಿತ್ರೋದ್ಯಮದಲ್ಲಿ ಅವರ ಸುದೀರ್ಘ ವೃತ್ತಿಜೀವನದಲ್ಲಿ, ಅವರು 150ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮಿಳು ಮಾತ್ರವಲ್ಲದೆ ಮಲಯಾಳಂ, ಹಿಂದಿ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!