HomeGadag Newsಪಾರದರ್ಶಕ ಆಡಳಿತಕ್ಕೆ ಆದ್ಯತೆ

ಪಾರದರ್ಶಕ ಆಡಳಿತಕ್ಕೆ ಆದ್ಯತೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಕಲಘಟಗಿ : ತಾವು ಸಚಿವರಾದಾಗಿನಂದ ವಾರದ ಬಹುತೇಕ ದಿನಗಳನ್ನು ನನ್ನ ಮತಕ್ಷೇತ್ರ ಹಾಗೂ ಜಿಲ್ಲೆಯ ಜನರ ಮಧ್ಯದಲ್ಲಿದ್ದು, ಅವರ ದೂರು-ಅಹವಾಲುಗಳಿಗೆ ಪ್ರತಿದಿನ ಸ್ಪಂದಿಸುತ್ತಿದ್ದೇನೆ. ನಿತ್ಯ ಜನತಾದರ್ಶನ ನಡೆಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ, ಕಾರ್ಮಿಕ ಇಲಾಖೆ ಸಚಿವ, ಕಲಘಟಗಿ ಶಾಸಕರಾದ ಸಂತೋಷ ಲಾಡ್ ಹೇಳಿದರು.

ಅವರು ಶನಿವಾರ ಬೆಳಿಗ್ಗೆ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಇತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಕಾರವೇ ಜನರ ಮನೆ ಬಾಗಿಲಿಗೆ ಹೋಗುತ್ತಿದೆ. ಅವರ ಬೇಕು, ಬೇಡಿಕೆಗಳಿಗೆ ಸ್ಪಂದಿಸುತ್ತಿದೆ. ಧಾರವಾಡ ಜಿಲ್ಲಾಡಳಿತ ಜನಸಂಪರ್ಕ, ಜನಸ್ಪಂದನೆ ಕಾರ್ಯಕ್ರಮಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಶ್ಲಾಘಿಸಿದರು.

ವಯಸ್ಕ ಮಗ ವಿಶೇಷಚೇತನನಿದ್ದು, ಏಳಲು, ಅಡ್ಡಾಡಲು ಬರುವದಿಲ್ಲ. ಮನೆಯ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ. ಮಗನನ್ನು ಸಾಕಿ-ಸಲುಹಲು ಸಹಾಯ ಮಾಡಿ ಎಂದು ವಿಶೇಷಚೇತನನ ತಾಯಿ ಕಸ್ತೂರಿ ಸೋಮಣ್ಣ ತುಂಬ್ರಿಕೊಪ್ಪ ಅವರು ಇಂದಿನ ಜಿಲ್ಲಾಧಿಕಾರಿಗಳ ಜನಸ್ಪಂದನದಲ್ಲಿ ಉಸ್ತುವಾರಿ ಸಚಿವರಲ್ಲಿ ವಿನಂತಿಸಿದರು. ಅವರ ಪರಿಸ್ಥಿತಿ ನೋಡಿ, ಕಣ್ಣೀರಾದ ಸಚಿವ ಸಂತೋಷ ಲಾಡ್, ತಮ್ಮ ಫೌಂಡೇಶನ್ ವತಿಯಿಂದ ಸಹಾಯ ಮಾಡುವದಾಗಿ ತಿಳಿಸಿದರು. ಆರೋಗ್ಯ, ಅಂಗವಿಕಲ ಕಲ್ಯಾಣ ಇಲಾಖೆಯಿಂದ ಯೋಜನಗಳ ಸಹಾಯ ಮಾಡಿಸುವದಾಗಿ ಸಚಿವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜನಸಂಪರ್ಕ, ಜನಸ್ಪಂದನ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಕ್ರಮವಹಿಸಲಾಗಿದೆ. ಸರಕಾರದ ಆಶಯದಂತೆ ಜನಸ್ನೇಹಿ, ಜನಪರ ಆಡಳಿತ ನೀಡಲು ಜಿಲ್ಲಾಡಳಿತ ಕ್ರಮವಹಿಸಿದೆ ಎಂದರು.

ವೇದಿಕೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ತಾಲೂಕಿನ ಉಸ್ತವಾರಿ ಅಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶ್ಯಾನಪ್ಪಗೌಡ ಪಾಟೀಲ, ತಾಲೂಕು ಅಧ್ಯಕ್ಷ ಬಸವರಾಜ ಬಾವಕರ ಉಪಸ್ಥಿತರಿದ್ದರು.

ಕಲಘಟಗಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನೀಯರು ಸ್ವಾಗತ ಗೀತೆ ಪ್ರಸ್ತುತಪಡಿಸಿದರು. ಕಲಘಟಗಿ ತಹಸೀಲ್ದಾರ ಯಲ್ಲಪ್ಪ ಗೋಣೆನ್ನವರ ಸ್ವಾಗತಿಸಿದರು. ನಾಗಪ್ಪ ಮನ್ನಿಕೇರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜನರ ಮಧ್ಯದಲ್ಲಿದ್ದು ಜನರ ಸಮಸ್ಯೆಗಳಿಗೆ ನಿತ್ಯ ಧ್ವನಿ ಆಗಿದ್ದೇವೆ. ಕಲಘಟಗಿ ವಿಧಾನಸಭಾ ಮತಕ್ಷೇತ್ರದ ಪ್ರತಿ ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿ, ಅಲ್ಲಿನ ಜನಪ್ರತಿನಿಧಿಗಳು, ಗ್ರಾಮಸ್ಥರೊಂದಿಗೆ ಗ್ರಾಮದ ಸಮಸ್ಯೆ, ಬೇಡಿಕೆಗಳನ್ನು ಚರ್ಚಿಸಿ, ಪರಿಹಾರ ಕಲ್ಪಿಸಲಾಗಿದೆ. ನಾನು ಒರ್ವ ಸಚಿವನಾಗಿ, ರಾಜ್ಯದಲ್ಲಿ ಮೊದಲ ಬಾರಿಗೆ ಮತಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿ, ಸ್ವತಃ 28 ಗ್ರಾಮ ಪಂಚಾಯತಿಗಳ ಮಟ್ಟದಲ್ಲಿ ಜನಸಂಪರ್ಕ ಸಭೆ ಜರುಗಿಸಿದ್ದೇನೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!