ಸಿಎಂ ಫೋಟೋ ಬಳಸಿ ಕೋಮು ಪ್ರಚೋದನೆ ಆರೋಪ: ಪೋಸ್ಟ್‌ ಕಾರ್ಡ್‌ ನ್ಯೂಸ್‌ ಸಂಸ್ಥಾಪಕ ಅರೆಸ್ಟ್

0
Spread the love

ಮಂಗಳೂರು:- ಸಿಎಂ ಫೋಟೋ ಬಳಸಿ ಕೋಮು ಪ್ರಚೋದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಸ್ಟ್‌ ಕಾರ್ಡ್‌ ನ್ಯೂಸ್‌ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಅವರನ್ನು ಅರೆಸ್ಟ್ ಮಾಡಲಾಗಿದೆ.

Advertisement

ಮೂಡಬಿದಿರೆ ಪಿಎಸ್ಐ ಕೃಷ್ಣಪ್ಪ ಎಂಬವರ ದೂರಿನಡಿ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ವಿಕ್ರಂ ಹೆಗ್ಡೆ ಅವರ ಬಂಧನವಾಗಿದೆ. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಆರೋಪ?

ಸಿಎಂ ಸಿದ್ದರಾಮಯ್ಯ ಫೋಟೋವನ್ನು ಎಡಿಟ್ ಮಾಡಿ ಕೋಮು ಪ್ರಚೋದನೆ ಆರೋಪ ಇವರ ಮೇಲಿದೆ. ʼಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂಥಹ ಪ್ರಕರಣ ಮರುಕಳಿಸಲ್ಲ’ ಎಂದು ಪೋಸ್ಟ್ ಹಾಕಿದ್ದರು.


Spread the love

LEAVE A REPLY

Please enter your comment!
Please enter your name here