ಬೆಂಗಳೂರು: ರಾಜಧಾನಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರನ್ನು ಅವಹೇಳನ ಮಾಡುವಂತಹ ಆಕ್ಷೇಪಾರ್ಹ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ.
ಮಲ್ಲೇಶ್ವರಂ 15ನೇ ಕ್ರಾಸ್‌ನ ಬಿಎಂಟಿಸಿ ಬಸ್ ನಿಲ್ದಾಣದ ಗೋಡೆ ಹಾಗೂ ಐತಿಹಾಸಿಕ ಕಾಡುಮಲ್ಲೇಶ್ವರ ದೇವಸ್ಥಾನದ ಪಕ್ಕದ ಕಾಂಪೌಂಡ್ ಗೋಡೆಗೆ ಕಿಡಿಗೇಡಿಗಳು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎನ್ನಲಾಗಿದೆ.
ಬಸ್ ನಿಲ್ದಾಣದ ಬಳಿ ಮೂರು ಪ್ರತ್ಯೇಕ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಬರಹಗಳನ್ನು ಮುದ್ರಿಸಲಾಗಿದೆ.
ಯಾರ ಕಣ್ಣಿಗೂ ಬೀಳದಂತೆ ನಿನ್ನೆ ಮಧ್ಯರಾತ್ರಿಯಲ್ಲಿ ಪೋಸ್ಟರ್‌ಗಳನ್ನು ಅಂಟಿಸಿರುವ ಶಂಕೆ ವ್ಯಕ್ತವಾಗಿದೆ. ಇಂದು ಮುಂಜಾನೆ ಸಾರ್ವಜನಿಕರ ಗಮನಕ್ಕೆ ಬರುತ್ತಿದ್ದಂತೆ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಪೋಸ್ಟರ್‌ಗಳನ್ನು ಹರಿದು ತೆರವುಗೊಳಿಸಿದ್ದಾರೆ.
ಇನ್ನು ದೇವಸ್ಥಾನದ ಪಕ್ಕದ ಗೋಡೆಗೆ ಇಂತಹ ಪೋಸ್ಟರ್‌ಗಳನ್ನು ಅಂಟಿಸಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.



