ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪೋಸ್ಟರ್ ವಾರ್ ಮತ್ತೆ ಮುನ್ನೆಲೆಗೆ ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಅವರ ವಿರುದ್ಧ ನಗರದ ಹಲವೆಡೆ ಭಿತ್ತಿಪತ್ರಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮನೆ ಸಮೀಪವೂ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ವಿಜಯೇಂದ್ರ ಅವರು ನೀಡಿರುವ ಹೇಳಿಕೆಗಳಿಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ರಾಜಾಜಿನಗರ, ಮಂಜುನಾಥನಗರ ಸೇರಿದಂತೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಭಿತ್ತಿಪತ್ರಗಳಲ್ಲಿ ವಿಜಯೇಂದ್ರ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಬರಹಗಳನ್ನು ಬಳಸಲಾಗಿದೆ ಎನ್ನಲಾಗಿದೆ.
ಈ ಬೆಳವಣಿಗೆಯಿಂದಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ನಾಯಕರ ಹೇಳಿಕೆಗಳಿಗೆ ಪ್ರತಿಯಾಗಿ ಪೋಸ್ಟರ್ಗಳ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿರುವ ಎರಡೂ ಪಕ್ಷಗಳ ನಡುವಿನ ಸಂಘರ್ಷ ಇದೀಗ ಮತ್ತೊಮ್ಮೆ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.








