ಬೆಂಗಳೂರು: ಜಾಮೀನು ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದ ಪವಿತ್ರಾಗೌಡ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಎ1 ಆಗಿದ್ದು, ಈ ಕೇಸ್‌ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ಪವಿತ್ರಾಗೌಡ ಪರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ.
ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು. ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.