ಬೆಂಗಳೂರು: ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ. ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕಿಡಿಕಾರಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ. ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ.
Advertisement
ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ. ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ. ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಆರ್.ಅಶೋಕ್ ಸಲಹೆ ನೀಡಿದ್ದಾರೆ.