ಬೆಂಗಳೂರು: ಅಧಿಕಾರ ಶಾಶ್ವತವಾಗಿರಲ್ಲ. ಡಿಕೆಶಿಗೆ ತಮ್ಮ ಮಾತಿನ ಮೇಲೆ ಹಿಡಿತ ಇರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಧಿಕಾರದ ದರ್ಪ ಅವರಿಗೆ ಈ ರೀತಿ ಮಾತನಾಡಿಸಿದೆ. ಜಯನಗರದ ಜನ ಏನು ತಪ್ಪು ಮಾಡಿದ್ದಾರೆ. ಅಲ್ಲಿ ನಮ್ಮ ಶಾಸಕರು ಇದ್ದಾರೆ. ಅವರು ತಗ್ಗಿ ಬಗ್ಗಿ ನಡೆಯಬೇಕಾ? ನಾವೇನು ಪ್ರಜಾಪ್ರಭುತ್ವದಲ್ಲಿ ಇದ್ದಿವೋ? ಇಲ್ಲ ಸರ್ವಾಧಿಕಾರಿ ಆಡಳಿತದಲ್ಲಿ ಇದ್ದೀವೋ? ಕ್ಷೇತ್ರದ ಶಾಸಕರಿಗಷ್ಟೇ ಅಲ್ಲ ಮತದಾರರಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಅಧಿಕಾರ ಶಾಶ್ವತವಾಗಿರಲ್ಲ. ಅವರಿಗೆ ತಮ್ಮ ಮಾತಿನ ಮೇಲೆ ಹಿಡಿತ ಇರಲಿ. ವಿಪಕ್ಷ ಶಾಸಕರ ಮೇಲೆ ದಬ್ಬಾಳಿಕೆ ಸಹಿಸುವುದಿಲ್ಲವೆಂದು ಡಿಕೆಶಿ ಕೊಟ್ಟಿರುವ ರೀತಿಯ ಹೇಳಿಕೆ ಕೊಡುವುದನ್ನು ಮೊದಲು ನಿಲ್ಲಿಸಲಿ ಎಂದು ಹೇಳಿದರು. ಮೂರೂವರೆ ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ನೀಡಿದ ವಿಜಯೇಂದ್ರ, ಶಾಸಕರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವದು. ಈಗಾಗಲೇ ಸಿಎಂ ರಾಜೀನಾಮೆ ನಿಗದಿಯಾಗಿದೆ. ಅದು ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೊತ್ತಿದೆ ಎಂದರು.