ಯಾದಗಿರಿ:- ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ರೈತರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಸದಬ ಗ್ರಾಮದ ನಿವಾಸಿಗಳಾದ 40 ವರ್ಷದ ಈರಪ್ಪ, 30 ವರ್ಷದ ದೇವು, 22 ವರ್ಷದ ಸುರೇಶ್ ಮೃತ ದುರ್ದೈವಿಗಳು. ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ಈ ಅವಘಡ ಸಂಭವಿಸಿದೆ.
ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಘಟನೆ ಬೆನ್ನಲ್ಲೇ ಕೆಂಭಾವಿ ಸಮುದಾಯ ಆಸ್ಪತ್ರೆ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.