ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಅನನ್ಯವಾದುದು

0
Pragatibandhu Self Help Societies Federation office bearers convention
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಭಕ್ತಿ, ಶ್ರದ್ಧೆ, ನಂಬಿಕೆಯಿಂದ ನಡೆದರೆ ಅದರಲ್ಲಿ ಯಶಸ್ಸು ಕಾಣಬಹುದು ಎನ್ನುವದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಸಾಕ್ಷಿಯಾಗಿದೆ. ಪ್ರತಿ ಕುಟುಂಬದಲ್ಲಿ ಆರ್ಥಿಕ ಸುಸ್ಥಿರತೆಯನ್ನು ತರುವಲ್ಲಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

Advertisement

ಅವರು ಸೋಮವಾರ ಪಟ್ಟಣದ ಶ್ರೀ ರಂಭಾಪುರಿ ಕಲ್ಯಾಣಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕು ಮಟ್ಟದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಧರ್ಮಸ್ಥಳ ಕ್ಷೇತ್ರದ ಪ.ಪೂ. ರಾಜಶ್ರೀ ಡಾ. ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ.ಹೇಮಾವತಿ ಹೆಗ್ಗಡೆ ಅವರ ಕೃಪಾಶೀರ್ವಾದ ಮತ್ತು ಕನಸಿನ ಕೂಸಾಗಿದ್ದು, ನಾಡಿನ ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲತೆ ಸಾಧಿಸುವದರ ಜೊತೆಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕೆನ್ನುವ ಅವರ ಇಚ್ಛೆ ಸಫಲವಾಗಿದೆ. ಧರ್ಮಸ್ಥಳ ಸಂಸ್ಥೆ ಮಹಿಳೆಯರಿಗೆ ಶಕ್ತಿ ಸಾಮರ್ಥ್ಯ ತುಂಬಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ಸಾಗುವಂತೆ ಮಾಡಿದೆ. ಇದರಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಪ್ರಾಮಾಣಿಕತೆಯಿಂದ ನಡೆದುಕೊಂಡಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಮಾಡುತ್ತಿರುವ ಸಾಮಾಜಿಕ, ಶೈಕ್ಷಣಿಕ ಆರೋಗ್ಯ, ಕೃಷಿ, ಹೈನುಗಾರಿಕೆ ಕ್ಷೇತ್ರದಲ್ಲಿನ ಮಹತ್ತರ ಕಾರ್ಯಗಳು, ಕೆರೆ ಅಭಿವೃದ್ಧಿ, ಶ್ರದ್ಧಾ ಕೇಂದ್ರ, ಸ್ವಚ್ಚತೆ, ವ್ಯಸನ ಮುಕ್ತ ಸಮಾಜ ಹೀಗೆ ಯೋಜನೆಯ ಅನೇಕ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಈ ಸಮಾಜದಿಂದ ನಾವು ಎಲ್ಲವನ್ನೂ ಪಡೆದಿದ್ದೇವೆ. ನಾವು ಬೆಳೆದರೆ ಸಾಲದು, ನಮ್ಮ ಗ್ರಾಮದ ಹತ್ತಾರು ಕುಟುಂಬಗಳೂ ಬೆಳೆಯುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ಗದಗ ಎಸ್‌ಬಿಐ ರೀಜನಲ್ ಮ್ಯಾನೇಜರ್ ನಾಗಸುಬ್ಬರೆಡ್ಡಿ, ಜಿಲ್ಲಾ ನಿರ್ದೇಶಕ ಯೋಗೀಶ್ ಎ., ತಾಲೂಕಿನ ವಲಯ ಮೇಲ್ವಿಚಾರಕರು ಮುಂತಾದವರಿದ್ದರು. ಕ್ಷೇತ್ರ ಯೋಜನಾಧಿಕಾರಿ ಪುನೀತ್ ಓಲೇಕಾರ ಸ್ವಾಗತಿಸಿದರು. ಶಾಂತಾ ಬೆನಕಣ್ಣವರ ನಿರೂಪಿಸಿದರು. ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕುಗಳ ಸ್ವಸಹಾಯ ಗುಂಪುಗಳ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ, ದೇಶದಲ್ಲಿ ಜನರಿಗಾಗಿ, ಸಮಾಜಕ್ಕಾಗಿ ಸೇವೆ ನೀಡುವ ಯಾವುದಾದರೂ ಧಾರ್ಮಿಕ ಸ್ಥಳವಿದ್ದರೆ ಅದು ಶ್ರೀಕ್ಷೇತ್ರ ಧರ್ಮಸ್ಥಳ ಮಾತ್ರ. ಸ್ವಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಮೂಲಕ ವಿಶ್ವಾಸದಿಂದ ಕಾರ್ಯ ಮಾಡುತ್ತಿರುವದು ಈ ಸಂಸ್ಥೆ ಮಾತ್ರ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಕಾರ್ಯವನ್ನು ಯಾವುದೇ ಸರಕಾರಗಳು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here