HomeGadag Newsಸೆ.12ರಂದು ಬೆಟಿಗೇರಿಯಲ್ಲಿ ಪ್ರಜಾ ಸೇವಾ ಆಂದೋಲನ

ಸೆ.12ರಂದು ಬೆಟಿಗೇರಿಯಲ್ಲಿ ಪ್ರಜಾ ಸೇವಾ ಆಂದೋಲನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಬೆಟಿಗೇರಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ಸೆ.12ರಂದು ಬೆಳಗ್ಗೆ 10.30ಕ್ಕೆ ಬೆಟಿಗೇರಿಯ ತಾರಾಲಯದಲ್ಲಿ ನಡೆಯಲಿದೆ.

ಗದಗ ಶಾಸಕ ಡಾ. ಎಚ್.ಕೆ. ಪಾಟೀಲ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಅಹವಾಲುಗಳು ಹಾಗೂ ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಮನವಿಗಳನ್ನು ಸಲ್ಲಿಸಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವುದು ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳು ಮತ್ತು ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವುದು ಸಭೆಯ ಉದ್ದೇಶವಾಗಿದೆ.

ಬೆಟಿಗೇರಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಕೋರಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img