HomeBengaluru Newsಪ್ರಜ್ವಲ್ ಪ್ರಕರಣ ನೈತಿಕ ಅಧಃಪತನದ ಪರಮಾವಧಿ:ತಾಹೇರ್ ಹುಸೇನ್

ಪ್ರಜ್ವಲ್ ಪ್ರಕರಣ ನೈತಿಕ ಅಧಃಪತನದ ಪರಮಾವಧಿ:ತಾಹೇರ್ ಹುಸೇನ್

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಹಾಸನದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಪ್ರಕರಣದಿಂದ ರಾಜ್ಯವು ದೇಶದ ಮುಂದೆ ತಲೆತಗ್ಗಿಸುವಂತೆ ಮಾಡಿದೆ. ಇಂತಹ ವಿಕೃತಿ ಹೊಂದಿರುವವರು ಜನ ಪ್ರತಿನಿಧಿಯಾಗಿರುವುದು ಸಂಸತ್ತಿನ ಇತಿಹಾಸಕ್ಕೆ ಕಪ್ಪು ಚುಕ್ಕೆ. ನೈತಿಕ ಅಧಃಪತನದ ಪರಮಾವಧಿಯಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂತ್ರಸ್ತ ಮಹಿಳೆಯರು ಪ್ರಜ್ವಲ್ ಜೊತೆಗೆ ರೇವಣ್ಣನವರ ಮೇಲೆಯೂ ಆರೋಪ ಹೊರಿಸುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಭುಗಿಲೆದ್ದ ಪ್ರತಿಭಟನೆಗಳಿಂದ ಪಾರಾಗಲು ಕಾಟಾಚಾರದ ತನಿಖೆಯಾಗಬಾರದು. ಹೆಣ್ಣುಮಕ್ಕಳ ಅಸಹಾಯಕತೆಯನ್ನು ದುರುಪಯೋಗಪಡಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಸತ್ಯಾಸತ್ಯತೆ ಹೊರ ಬರಲೇಬೇಕು. ತಪ್ಪು ಮಾಡಿ ವಿದೇಶಕ್ಕೆ ಪಲಾಯನ ಮಾಡುವುದು ಇಂದು ಸಾಮಾನ್ಯವಾಗಿದೆ. ಈ ವಿದೇಶ ಪಲಾಯನದಲ್ಲಿ ಯಾರದ್ದಾದರೂ ಪ್ರಭಾವ ಇದೆಯೇ ಎಂಬ ಕುರಿತೂ ತನಿಖೆಯಾಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!