ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
Advertisement
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
ಇದರೊಂದಿಗೆ, ಆಗಸ್ಟ್ 29ರವರೆಗೂ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಇರುವುದು ನಿಶ್ಚಿತ. ಪ್ರತ್ಯೇಕ ಅರ್ಜಿಗಳನ್ನು ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿತ್ತು. ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ದೂರುಗಳ ಎಫ್‌ಐಆರ್ ರದ್ದುಪಡಿಸಲು ಅರ್ಜಿಗಳಲ್ಲಿ ಕೋರಲಾಗಿತ್ತು.