ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸದ್ಯ ಜೈಲು ಪಾಲಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಾದ ಪ್ರಜ್ವಲ್ ಮತ್ತು ಸೂರಜ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಸಿಐಡಿ ಸೈಬರ್ ಕ್ರೈಮ್ ಠಾಣೆ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು ಆದೇಶವನ್ನು ಕೋರ್ಟ್ ಇಂದು ಪ್ರಕಟಿಸಲಿದೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣ ಅವರ ಜಾಮೀನು ಆದೇಶವನ್ನೂ ಕೋರ್ಟ್ ಇಂದೇ ಪ್ರಕಟಿಸಲಿದೆ.
ಸೂರಜ್ ವಿರುದ್ಧ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ ಜಾಮೀನು ಕೋರಿ ಸೂರಜ್ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಅರ್ಜಿಗಳ ವಿಚಾರಣೆ ನಡೆದಿದ್ದು, ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಹೀಗಾಗಿ ಸಹೋದರರ ಪಾಲಿಗೆ ಮುಖ್ಯ ದಿನ ಆಗಿದೆ.