ವಿಜಯಸಾಕ್ಷಿ ಸುದ್ದಿ, ಡಂಬಳ: ಗದಗ ಜಿಲ್ಲಾ ಪಂಚಾಯಿತಿ, ಮುಂಡರಗಿ ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡರಗಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮುಂಡರಗಿ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ಇಲ್ಲಿನ ಡಿಪಿಇಪಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಗೌಸಿದ್ಧಪ್ಪ ಹಳ್ಳಾಕಾರ ಪ್ರಥಮ ಸ್ಥಾನ ಪಡೆದಿದ್ದಾಳೆ.
Advertisement
ಸಾಧಕ ವಿದ್ಯಾರ್ಥಿನಿಗೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗೌಸಿದ್ಧಪ್ಪ ಹಾದಿಮನಿ, ಮುಖ್ಯೋಪಾಧ್ಯಾಯರಾದ ಎಸ್.ಜಿ. ಪಾಟೀಲ್, ಎಸ್‌ಡಿಎಂಸಿ ಸದಸ್ಯರು, ಗ್ರಾಮದ ಹಿರಿಯರು ಅಭಿನಂದಿಸಿದ್ದಾರೆ.