ದಾವಣಗೆರೆ: ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯ ಸಮಸ್ಯೆಯಿಂದ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಗರ್ ಏರುಪೇರಿದ ಕಾರಣ ವಾಲ್ಮೀಕಿ ಜಯಂತ್ರಿ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಸದ್ಯ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದ್ರೆ, ಶ್ರೀಗಳನ್ನ ನೋಡಲು ಭಕ್ತರ ದಂಡು ಆಸ್ಪತ್ರೆಗೆ ದೌಡಾಯಿಸುತ್ತಿದೆ. ಇದರಿಂದ ಶ್ರೀಗಳನ್ನು ಬೇರೆಡೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. ಇನ್ನು ಪ್ರಸನ್ನಾನಂದಪುರಿಶ್ರೀ ಆರೋಗ್ಯದ ಬಗ್ಗೆ ಬಸವೇಶ್ವರ ಆಸ್ಪತ್ರೆಯ ವೈದ್ಯ ಡಾ.ವಿಶ್ವಾಸ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,
ವಾಲ್ಮೀಕಿಶ್ರೀಗಳಿಗೆ ಶುಗರ್ ಅನ್ ಕಂಟ್ರೋಲ್ಡ್ ಆಗಿತ್ತು. ಆಸ್ಪತ್ರೆಗೆ ಬಂದಾಗ ಶುಗರ್ ಲೆವಲ್ 440 ಆಗಿತ್ತು. ಜೊತೆಗೆ ಜ್ವರ ಬಂದಿದ್ದವು. ಸದ್ಯ ಚಿಕಿತ್ಸೆ ಬಳಿಕ ಈಗ ಶುಗರ್ ಲೆವಲ್ 160ಕ್ಕೆ ಬಂದಿದ್ದು, ಶ್ರೀಗಳಿಗೆ ಇನ್ನೂ ಕೆಲ ಪರೀಕ್ಷೆಗಳನ್ನು ಮಾಡಿಸಬೇಕಿದೆ. ಆದ್ರೆ, ಆಸ್ಪತ್ರೆಗೆ ಭಕ್ತರು ಬರುತ್ತಿದ್ದರಿಂದ ಶ್ರೀಗಳನ್ನು ಬೇರೆಡೆ ಸ್ಥಳಾಂತರಕ್ಕೆ ಯೋಚಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.