ಪ್ರತಿಭಾ ಕಾರಂಜಿಯಿಂದ ಪ್ರತಿಭೆಯ ಅನಾವರಣ : ಡಿ.ಎಚ್. ಪಾಟೀಲ

0
Pratibha Karnji and Kalotsava programme
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಡಿ.ಎಚ್. ಪಾಟೀಲ ಹೇಳಿದರು.

Advertisement

ಅವರು ಪಟ್ಟಣದ ಬಿಸಿಎನ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಲಕ್ಷ್ಮೇಶ್ವರ ಉತ್ತರ ಮತ್ತು ಮಾಗಡಿ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಭಾ ಕಾರಂಜಿ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳನ್ನು ನಡೆಸಲಾಗುತ್ತದೆ ಎಂದರು. ಶಿರಹಟ್ಟಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ. ಇದರಲ್ಲಿ ಯಶಸ್ವಿ ಮಕ್ಕಳಿಗೆ ಪ್ರಶಂಸಾ ಪತ್ರಗಳು ಮತ್ತು ಬಹುಮಾನಗಳನ್ನು ನೀಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಉನ್ನತ ಮಟ್ಟದ ಸ್ಪರ್ಧೆಗಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಎಮ್. ಯರಗುಪ್ಪಿ, ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಎಮ್. ಗುತ್ತಲ ಮಾತನಾಡಿ, ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಮಕ್ಕಳು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದರು.

ಬಿಸಿಎನ್ ಸ್ಪೆಕ್ಟ್ರಮ್ ಆಡಳಿತಾಧಿಕಾರಿ ನಾಗರಾಜ ಯಂಡಿಗೇರಿ ಅಧ್ಯಕ್ಷತೆ ವಹಿಸಿದ್ದರು. ಎಫ್.ಎಸ್. ತಳವಾರ, ಗೀತಾ ಹಳ್ಯಾಳ, ವಿ.ಎಚ್. ದೀಪಾಳಿ, ಮುಖ್ಯ ಶಿಕ್ಷಕರಾದ ವಿರೇಶ ಕಮ್ಮಾರ, ಎಸ್.ಡಿ. ಲಮಾಣಿ, ಎಚ್.ಎಮ್. ಗುತ್ತಲ, ಕ್ಲಸ್ಟರ್ ಸಿಆರ್‌ಪಿಗಳಾದ ಉಮೇಶ ನೇಕಾರ, ಕೆ.ಪಿ. ಕಂಬಳಿ, ಎನ್.ಎನ್. ಸಾವಿರಕುರಿ, ಎನ್.ಎ. ಮುಲ್ಲಾ, ಸತೀಶ ಬೋಮಲೆ, ಸಿ.ವಿ. ವಡಕಣ್ಣವರ, ಗಿರೀಶ್ ನೇಕಾರ, ಜ್ಯೋತಿ ಗಾಯಕವಾಡ, ಲೋಕೇಶ ಮಠದ, ಎನ್.ಎನ್. ಶಿಗ್ಲಿ, ಎಚ್.ಡಿ. ನಿಂಗರೆಡ್ಡಿ, ಡಿ.ಸಿ. ಪತ್ತಾರ, ಎನ್.ಎಸ್. ಬಂಕಾಪೂರ ಹಾಗೂ ಕ್ಲಸ್ಟರಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ 13 ಪ್ರಾಥಮಿಕ ಶಾಲೆಗಳು ಮತ್ತು 11 ಪ್ರೌಢಶಾಲೆಗಳ ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.


Spread the love

LEAVE A REPLY

Please enter your comment!
Please enter your name here