ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶನಿವಾರ ಗದಗ ನಗರದ ಲೈಲಾ ಕಾನ್ವೆಂಟ್ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಜಿಲ್ಲೆಯ 7 ತಾಲೂಕುಗಳ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದರಲ್ಲಿ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಾದ ಪ್ರತೀಕ್ಷಾ ಭಜಂತ್ರಿ, ನಿರ್ಗುಣ ಕಲ್ಮನಿ, ಅನನ್ಯ ಕಲಾಲ, ಕೌಶಲ್ಯ ಲಮಾಣಿ, ಅಶ್ವಿನಿ ರಾಲದೊಡ್ಡಿ, ಸವಿತಾ ಲಮಾಣಿ ಹಳ್ಳಿ ಸೊಗಡಿನ ಜಾನಪದ ನೃತ್ಯದಲ್ಲಿ ಭಾಗವಹಿಸಿ ಉತ್ತಮವಾಗಿ ನೃತ್ಯ ಪ್ರದರ್ಶನ ಮಾಡಿದ್ದಕ್ಕಾಗಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವಸತಿ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.