ವಿಜಯಸಾಕ್ಷಿ ಸುದ್ದಿ, ಗದಗ : ಸಮಾಜ ಬಾಂಧವರೆಲ್ಲರೂ ಒಂದೆಡೆ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಇತ್ತೀಚೆಗೆ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಡೆದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದದಲ್ಲಿ ಅವರು ಮಾತನಾಡಿದರು.
ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ಶ್ರೀ ವಚನಾನಂದ ಸ್ವಾಮಿಗಳು ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು, ಅಧ್ಯಕ್ಷತೆಯನ್ನು ಮೋಹನ ಮಾಳಶೆಟ್ಟಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಗಣ್ಯ ಉದ್ದಿಮೆದಾರರಾದ ಅಶೋಕ ಸಂಕಣ್ಣವರ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ಶ್ರೀ ವಚನಾನಂದ ಸ್ವಾಮಿಗಳನ್ನು ಪಂಚಮಸಾಲಿ ಸಮಾಜದ ಪರವಾಗಿ ಸನ್ಮಾನಿಸಿ ಗೌರವಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಸಿಸಿ. ಪಾಟೀಲ, ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಪಂಚಮಸಾಲಿ ಸಮಾಜ ಸೇವಾ ಟ್ರಸ್ಟಿಗಳಾದ ಶಾಂತಪ್ಪ ಮುಳವಾಡ, ಬಾಲಚಂದ್ರ ಭರಮಗೌಡ್ರ, ಅಶೋಕ ಸಂಕಣ್ಣವರ, ಪ್ರಕಾಶ ಮ್ಯಾಗೇರಿ, ಮಾಲತೇಶ ಪಾಟೀಲ, ಸಿದ್ದನಗೌಡ ಪಾಟೀಲ, ಮಹಾಂತೇಶಗೌಡ ಹಿರೇಮನಿಪಾಟೀಲ, ಶಂಕರ ಕರಿಬಿಷ್ಠಿ, ಸುರೇಶ ಚಿತ್ತರಗಿ, ವಿಶ್ವನಾಥ ಹಳ್ಳಿಕೇರಿ, ಶಿವರಾಜಗೌಡ ಹಿರೇಮನಿಪಾಟೀಲ, ಸಿದ್ದಲಿಂಗೇಶ ಕರಿಬಿಷ್ಠಿ, ಸಂತೋಷ ಅಕ್ಕಿ, ಸಂಗಮೇಶ ಕವಳಿಕಾಯಿ, ವಸಂತ ಪಡಗದ, ಶರಣಪ್ಪ ಬೋಳಣ್ಣವರ, ಸಂತೋಷ ಕಬಾಡಿ ಸೇರಿದಂತೆ ಪಂಚಮಸಾಲಿ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.