ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಆರೋಪಿಯನ್ನು ಬಂಧಿಸಿದ NIA

0
Spread the love

ಮಂಗಳೂರು:- ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬಂಧಿಸಿದೆ.

Advertisement

ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕತಾರ್‌ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಘಟನೆ ವಿವರ:

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರು 2022ರ ಜುಲೈ 26ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ದೆಹಲಿ ಕಚೇರಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದ ಎನ್‌ಐಎ ಓರ್ವ ಪ್ರಮುಖ ಆರೋಪಿ ಅತೀಖ್‌ ಅಹ್ಮದ್‌ ಸೇರಿ 22 ಆರೋಪಿಗಳನ್ನ ಬಂಧಿಸಿತ್ತು. ಒಟ್ಟು 28 ಆರೋಪಿಗಳ ವಿರುದ್ಧ ಜಾರ್ಜ್‌ ಶೀಟ್‌ ಸಲ್ಲಿಸಿದ್ದ ಎನ್‌ಐಎ ಉಳಿದ 6 ಆರೋಪಿಗಳಿಗೆ ತೀವ್ರ ಹುಡುಕಾಟ ನಡೆಸಿತ್ತು.

ಪ್ರಕರಣದ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ವಿದೇಶಕ್ಕೆ ಹಾರಿದ್ದ ಅಬ್ದುಲ್‌ ರಹಿಮಾನ್‌ ನನ್ನು ಇಂದು NIA ಬಂಧಿಸುವಲ್ಲಿ ಯಶಸ್ವಿಯಾಗಿದೆ.


Spread the love

LEAVE A REPLY

Please enter your comment!
Please enter your name here