ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ದೇಶದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ 3ನೇ ಬಾರಿಗೆ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಪ್ರಧಾನಿಯಾಗಲಿ, ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿ ಎಂದು ಸೋಮವಾರ ಬಿಜೆಪಿ ನಗರ ಘಟಕ ಹಾಗೂ ಯುವ ಮೋರ್ಚಾದಿಂದ ಪಟ್ಟಣದ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ಚಂದ್ರು ಲಮಾಣಿ, ದೇಶದಲ್ಲಿ ಮತ್ತೆ ಮೋದಿಯವರ ಅಲೆಯಿದ್ದು, ಬಿಜೆಪಿ ಈ ಬಾರಿ 400ಕ್ಕೂ ಅಧಿಕ ಸ್ಥಾನಗಳನ್ನು ಪಡೆದು, ನರೇಂದ್ರ ಮೋದಿಯವರು 3ನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿರಹಟ್ಟಿ ಮಂಡಲದ ಬಿಜೆಪಿ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ನಗರ ಘಟಕದ ಅಧ್ಯಕ್ಷ ನವೀನ ಬೆಳ್ಳಟ್ಟಿ, ಶಿರಹಟ್ಟಿ ಮಂಡಳ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಚಕ್ರಸಾಲಿ, ನೀಲಪ್ಪ ಹತ್ತಿ, ಎಂ.ಆರ್. ಪಾಟೀಲ, ಅನಿಲ ಮುಳುಗುಂದ, ನಿಂಗಪ್ಪ ಬನ್ನಿ, ಜೆಡಿಎಸ್ ತಾಲೂಕಾಧ್ಯಕ್ಷ ಪ್ರವೀಣ ಬಾಳಿಕಾಯಿ, ಅಶ್ವಿನಿ ಅಂಕಲಕೋಟಿ, ದುಂಡೆಶ ಕೋಟಗಿ, ಗಂಗಾಧರ ಮೆಣಸಿನಕಾಯಿ, ಯಶವಂತ ಭಜಂತ್ರಿ, ರಾಜಶೇಖರ ಶಿಗ್ಲಿಮಠ, ಚಂದ್ರಶೇಖರ ಹಂಪಣ್ಣವರ, ಬಸವರಾಜ ಮಡಿವಾಳರ, ಉಮೇಶ ಬೆಳವಿಗಿ, ಕಿರಣ ಲಮಾಣಿ, ವಿಜಯ ಕುಂಬಾರ, ಕಲ್ಲಪ್ಪ ಹಡಪದ, ವಿಶಾಲ ಬಟಗುರ್ಕಿ, ಈರಣ್ಣ ಪೂಜಾರ, ರಮೇಶ ಹಾಳದೋಟದ, ಫಕ್ಕೀರೇಶ ಅಣ್ಣಿಗೇರಿ, ಮಂಜುನಾಥ ಕೊಡಳ್ಳಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.