ಬಸವೇಶ್ವರ ಜಯಂತಿಯ ಪೂರ್ವಭಾವಿ ಸಭೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಎಪ್ರಿಲ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಗಳನ್ನೊಳಗೊಂಡ ಮೆರವಣಿಗೆಯು ನಗರದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಕಾರ್ಯಕ್ರಮದ ಸ್ಥಳಕ್ಕೆ ಬಂದು ತಲುಪಲಿದೆ. ಕಾರ್ಯಕ್ರಮದಲ್ಲಿ ಸಂಗೀತಗಾರರು ಬಸವೇಶ್ವರರ ವಚನಗಳನ್ನು ಪ್ರಸ್ತುತಪಡಿಸಲಿದ್ದಾರೆ. ಜಗಜ್ಯೋತಿ ಬಸವೇಶ್ವರರ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಲು ಕ್ರಮ ವಹಿಸಬೇಕು.ಎಲ್ಲ ಅಧಿಕಾರಿಗಳು ಜಯಂತಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಎಲ್ಲರೂ ಹಾಜರಿರಬೇಕು. ಒಟ್ಟಾರೆಯಾಗಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅಚ್ಚುಕಟ್ಟಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲ್ಪೋಪಹಾರ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಸರ್ವರನ್ನು ಸ್ವಾಗತಿಸಿ ವಂದಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖ್ಯಸ್ಥರು, ಗಣ್ಯರು, ಹಿರಿಯರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here