HomeDharwadಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ಶೂಟ್: ಜೋಡಿಯ ಮೋಡಿಗೆ ನೆಟ್ಟಿಗರು ಫಿದಾ!

ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ಶೂಟ್: ಜೋಡಿಯ ಮೋಡಿಗೆ ನೆಟ್ಟಿಗರು ಫಿದಾ!

For Dai;y Updates Join Our whatsapp Group

Spread the love

ಬೆಂಗಳೂರು : ಕೆಲ ದಶಕಗಳ ಹಿಂದೆ ಮದುವೆಯ ದಿನ ಫೋಟೋ ತೆಗೆಸಿಕೊಂಡರೆ ಅದೇ ದೊಡ್ಡ ಸಂಭ್ರಮವಾಗಿತ್ತು. ಆದರೆ ಬರಬರುತ್ತಾ ಮದುವೆಯ ಬಳಿಕವೂ ಒಂದಿಷ್ಟು ಫೋಟೋಶೂಟ್​, ವಿಡಿಯೋ ಶೂಟ್​ಗಳು ನಡೆದವು.

ತಮಗೆ ಬೇಕಾದ ರೀತಿಯಲ್ಲಿ, ಬೇಕಾದ ಜಾಗವನ್ನು ಆಯ್ಕೆ ಮಾಡಿಕೊಂಡು ವಿವಿಧ ಭಂಗಿಗಳಲ್ಲಿ ಫೋಟೋ, ವಿಡಿಯೋಶೂಟ್​ ಮಾಡಿಸಿಕೊಂಡರು. ಆದರೆ ಕಾಲ ಕ್ರಮೇಣ ಈ ಫೋಟೋ- ವಿಡಿಯೋ ಹುಚ್ಚು ಯಾರ ಮಟ್ಟಿಗೆ ಬೆಳೆಯಿತು ಎಂದರೆ ಈಗಂತೂ ಮದುವೆಗೂ ಮೊದಲಿನ ಫೋಟೋಶೂಟ್​ ಮಾಮೂಲಾಗಿ ಬಿಟ್ಟಿದೆ.

ಅದರಂತೆ ನಾನಾ ಬಗೆಯ ಕಸರತ್ತು ಮಾಡಿ ಪ್ರೀ ವೆಡ್ಡಿಂಗ್ ಮಾಡುವ ಈ ಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ವಿಡಿಯೋ ಮಾಡಿದ ಜೋಡಿ ಈಗ ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗಿದೆ.

ಉತ್ತರಕನ್ನಡ ಹಾಗೂ ಶಿವಮೊಗ್ಗ ಮೂಲದ ಜೋಡಿಯೊಂದು ಯಕ್ಷಗಾನ ಹಾಗೂ ಭರತನಾಟ್ಯವನ್ನು ಬಿಂಬಿಸುವ ನೃತ್ಯರೂಪಕವನ್ನು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು, ಇದು ನೆಟ್ಟಿಗರ ಶಭಾಸ್ ಗಿರಿಗೆ ಕಾರಣವಾಗಿದೆ.

ಜೋಗ ಸಮೀಪದ ಕಾಳಮಂಜಿಯವರಾದ ಚಂದನ್ ಕಲಾಹಂಸ ಹಾಗೂ ಯಲ್ಲಾಪುರ ಸಮೀಪದ ಉಮ್ಮಚಗಿಯ ಭಾರ್ಗವಿ ಬಿ.ಎಚ್ ಈ ವಿಡಿಯೋದಲ್ಲಿ ಭಾಗಿಯಾಗಿದ್ದಾರೆ.

ಭಾರ್ಗವಿ ಅವರು ಭರತನಾಟ್ಯದಲ್ಲೇ ವಿದ್ವತ್ ಪೂರೈಸಿದ್ದು, ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಕೂಡ ಮುಗಿಸಿದ್ದಾರೆ. ಹಾಗೆಯೇ ಎಂ.ಕಾಂ. ಕೂಡಾ ಪೂರೈಸಿರುವ ಭಾರ್ಗವಿ ಖಾಸಗಿ ಕಂಪನಿಯೊಂದರಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಂತೆಯೇ ಬಿ.ಕಾಂ, ಎಂ.ಎ ಪದವೀಧರರಾದ ಚಂದನ್ ಕಲಾಹಂಸ ಬೆಂಗಳೂರಿನ ವಿಜಯನಗರದಲ್ಲಿ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ವೆಬ್ ಡಿಸೈನ್ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಸಂಸ್ಥೆ ನಡೆಸುತ್ತಿದ್ದಾರೆ. ಎಳವೆಯಲ್ಲಿ ಯಕ್ಷಗಾನ ಕಲಿತಿದ್ದ ಇವರು ತಮ್ಮ ಆಸಕ್ತಿಗಾಗಿ ಈ ವಿಡಿಯೋ ಮಾಡಿದ್ದಾಗಿ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ನ.14 ರಂದು ಶಿರಸಿ ಸಮೀಪದ ಕೊಳಗಿಬೀಸ್‌ನಲ್ಲಿ ಹಸೆಮಣೆ ಏರಲಿರುವ ನವಜೋಡಿಗೆ ನೆಟ್ಟಿಗರು ಶುಭಾಶಯಗಳ ಮಹಾಪೂರ ಹರಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!