ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ: ಒಪ್ಪದಿದ್ದಕ್ಕೆ ಬೆಂಕಿ ಹಚ್ಕೊಂಡ ಕಾನ್ಸ್‌ ಟೇಬಲ್

0
Spread the love

ಬೆಂಗಳೂರು: ಕಾನ್​ಸ್ಟೇಬಲ್ ಮೇಲೆ ಹೋಮ್​ಗಾರ್ಡ್ ಆಗಿರುವ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಕಾನ್​ಸ್ಟೇಬಲ್ ಸಂಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಪುಟ್ಟೇನಹಳ್ಳಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮನೆಗೆ ಬಂದು ಜಗಳ ಮಾಡಿಕೊಂಡ ಸಂಜಯ್​ ಮೇಲೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು ಎಂದು ಆರೋಪಿಸಲಾಗಿದೆ.

Advertisement

ಸಂಜಯ್ ಬಂಕ್​ಗೆ ತೆರಳಿ ಒಂದು ಲೀಟರ್ ಪೆಟ್ರೋಲ್ ತಂದಿದ್ದನು. ಪೆಟ್ರೋಲ್ ಹಾಕ್ತಿಯ ಹಾಕು ನೋಡೋಣ ಎಂದಿದ್ದನು. ಈ ವೇಳೆ ಸಂಜಯ್ ಹೊಟ್ಟೆ ಬೆನ್ನಿನ‌ ಮೇಲೆ ಪೆಟ್ರೋಲ್ ಸುರಿದಿದ್ದು, ನಂತರ ನೀರು ಹಾಕಿ ಬೆಂಕಿ ಆರಿಸಿ, ಸಂಜಯ್​ನನ್ನ ತನ್ನದೇ ಗಾಡಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಳು. ಪೊಲೀಸರ ತನಿಖೆ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿದೆ ಎಂದು ರಾಣಿ ಹೇಳಿಕೆ ನೀಡಿದ್ದಾಳೆ.

ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ.

ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here