ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ : ಗೋವಿಂದರೆಡ್ಡಿ

0
Preliminary Examination for Probationers Group A and B Group Posts
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ನಡೆಸಲು ಕ್ರಮ ಜರುಗಿಸಬೇಕು ಹಾಗೂ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ವಸ್ತ್ರ ಸಂಹಿತೆಯ ಅನುಸರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

Advertisement

ಶೂ-ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್‌ಫ್ಲುಡ್, ವೈರ್‌ಲೆಸ್ ಸೆಟ್ಸ್, ಪೇಪರ್, ಬುಕ್ಸ್ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬುತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ್, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ.

ಮೆಟಲ್ ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ.

ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ಮತ್ತು ಹಿಯರಿಂಗ್ ಏಡ್ ಉಪಕರಗಳನ್ನು ಧರಿಸಿರುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕು. ಹಿಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here