`ವೋಟ್ ಚೋರಿ’ ಸಮಾವೇಶದ ಕುರಿತು ಡಿ. 4ರಂದು ಪೂರ್ವಭಾವಿ ಸಭೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: 2026ನೇ ಸಾಲಿನ ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ ಹಾಗೂ ದೆಹಲಿಯ ರಾಮಲೀಲಾ ಮೈದಾನದಲ್ಲಿ ಜರುಗಲಿರುವ ಬೃಹತ್ `ವೋಟ್ ಚೋರಿ’ ಸಮಾವೇಶದ ಕುರಿತು ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಿ. 4ರಂದು ಮಧ್ಯಾಹ್ನ 12ಕ್ಕೆ ಪೂರ್ವಭಾವಿ ಸಭೆ ಜರುಗಲಿದೆ.

Advertisement

ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ವೀಕ್ಷಕರಾದ ಎಸ್.ಜಿ. ನಂಜಯ್ಯನಮಠ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಮೋಹನ್ ಅಸುಂಡಿ, ಎಂ.ಬಿ. ಸೌದಾಗಾರ ಭಾಗವಹಿಸುವರು.

ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಆಕಾಂಕ್ಷಿಗಳು ಉಪಸ್ಥಿತರಿರುವರು.

ಗದಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಗದಗ ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಗದಗ ಜಿಲ್ಲೆಯ  ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸದರಿ ಸಭೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ, ಗದಗ ಬ್ಲಾಕ್ ಅಧ್ಯಕ್ಷರಾದ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here