ಗ್ಯಾರಂಟಿ ಸಮಾವೇಶಕ್ಕೆ ಭರದ ಸಿದ್ಧತೆ

0
guarantee
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಮಾ.12ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಉಮಾ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಸೋಮವಾರ ಕಾರ್ಯಕ್ರಮದ ಸ್ಥಳದಲ್ಲಿ ಹಾಜರಿದ್ದು ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

Advertisement

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ.

samavesha

ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಎಚ್. ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿ.ಪ ಸದಸ್ಯ ಸಲೀಂ ಅಹ್ಮದ್, ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಲಕ್ಷ್ಮೇಶ್ವರ ತಾ.ಪಂ ಯೋಜನಾ ನಿರ್ದೇಶಕ ಹಾಗೂ ಆಡಳಿತಾಧಿಕಾರಿ ಜಗದೇವ ಬಿ, ಶಿರಹಟ್ಟಿ ತಾ.ಪಂ ಆಡಳಿತಾಧಿಕಾರಿ ಹಾಗೂ ಜಿ.ಪಂ ಮುಖ್ಯಯೋಜನಾಧಿಕಾರಿ ಎನ್.ಕೆ. ನಿರ್ಮಲಾ, ಲಕ್ಷ್ಮೇಶ್ವರ ಪುರಸಭೆ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ್ ಆಗಮಿಸುವರು.

ಲಕ್ಷ್ಮೇಶ್ವರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ತಹಸೀಲ್ದಾರ ವಾಸುದೇವ ಸ್ವಾಮಿ, ಶಿರಹಟ್ಟಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಓಲೇಕಾರ, ಶಿರಹಟ್ಟಿ ತಹಸೀಲ್ದಾರ ಹಾಗೂ ಪ.ಪಂ ಆಡಳಿತಾಧಿಕಾರಿ ಅನಿಲ ಬಡಿಗೇರ, ಶಿರಹಟ್ಟಿ ಆರಕ್ಷಕ ವೃತ್ತ ನಿರೀಕ್ಷಕ ನಾಗರಾಜ ಮಾಡಳ್ಳಿ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಶಿರಹಟ್ಟಿ ಪ.ಪಂ ಮುಖ್ಯಾಧಿಕಾರಿ ಸಿದ್ಧರಾಯ ಕಟ್ಟಿಮನಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಮಾ.12ರಂದು ನಡೆಯುವ ಈ ಸಮಾವೇಶಕ್ಕೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಅಂದಾಜು 8-10 ಸಾವಿರ ಫಲಾನುಭವಿಗಳು ಸೇರಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಗ್ರಾಮೀಣ ಪ್ರದೇಶಗಳಿಂದ ಬರುವ ಜನರಿಗೆ ವಾಹನ ವ್ಯವಸ್ಥೆ ಮತ್ತು ಸ್ಥಳದಲ್ಲಿ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭದ್ರತೆ ದೃಷ್ಟಿಯಿಂದ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ ವಾಸುದೇವ ಎಂ.ಸ್ವಾಮಿ ಹೇಳಿದರು.


Spread the love

LEAVE A REPLY

Please enter your comment!
Please enter your name here