ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಗೋವಿಂದರೆಡ್ಡಿ

0
Preparatory meeting
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 26 ಹಾಗೂ 27ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಯಾವುದೇ ಲೋಪ ದೋಷಗಳಿಲ್ಲದಂತೆ ನಡೆಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಬುಧವಾರ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 26ರಂದು ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 1.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಹಾಗೂ ಅಕ್ಟೋಬರ್ 27ರಂದು ಜರುಗುವ ಸ್ಪರ್ಧಾತ್ಮಕ ಪರೀಕ್ಷೆಯ ದಿನದಂದು ಬೆ 8.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷೆಯಲ್ಲಿ ಸಮಯ ಪರಿಪಾಲನೆ ಅತ್ಯವಶ್ಯಕವಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ತಪ್ಪದೇ ಗೋಡೆ ಗಡಿಯಾರ ಅಳವಡಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಲೋಪ ದೋಷಗಳಿಗೆ ಆಸ್ಪದ ನೀಡದೇ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಕುರ್ತಕೋಟಿ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ರುದ್ರಗೌಡ, ಅಂಗವಿಕಲ ಕಲ್ಯಾಣ ಇಲಾಖೆಯ ಅಧಿಕಾರಿ ಮಹಾಂತೇಶ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ಜರುಗಲು ವೀಕ್ಷಕರು, ಜಿಲ್ಲಾ ಮಟ್ಟದ ತ್ರಿ ಸದಸ್ಯ ಸಮಿತಿ ಹಾಗೂ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು, ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

 


Spread the love

LEAVE A REPLY

Please enter your comment!
Please enter your name here