ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗಂಗಿಮಡಿ ಬಳಿಯಿರುವ ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಪೂರ್ವಭಾವಿ ಸಭೆಯನ್ನು ಸೆ. 14ರಂದು ಬೆಳಿಗ್ಗೆ 10.30ಕ್ಕೆ ಕರೆಯಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಬೆಳಧಡಿ ವಹಿಸಲಿದ್ದಾರೆ.
ಸಭೆಯಲ್ಲಿ ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಗದಗ-ಬೆಟಗೇರಿ ಮತ್ತು ಗದಗ ಗ್ರಾಮೀಣ ಭಾಗದ ವಾಲ್ಮೀಕಿ ಸಮಾಜ ಬಾಂಧವರು, ವಾಲ್ಮೀಕಿ ಸಮಾಜದ ನೌಕರ ಬಾಂಧವರು, ವಾಲ್ಮೀಕಿ ಸಮಾಜದ ಹಿರಿಯರು, ಯುವಕರು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗದಗ ಜಿಲ್ಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆ ಕುರಿತು ಸಲಹೆ-ಸೂಚನೆಗಳನ್ನು ನೀಡಬೇಕೆಂದು ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸೇವಾ ಸಂಘದ ಅಧ್ಯಕ್ಷರಾದ ಬಸವರಾಜ ಬೆಳಧಡಿ ಮತ್ತು ಯುವ ಘಟಕದ ಅಧ್ಯಕ್ಷರಾದ ಅನಿಲಕುಮಾರ ಸಿದ್ಧಮ್ಮನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.