ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ.ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜೂನ್ 16ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರ ಪೂರ್ವಸಿದ್ಧತೆಯ ಅಂಗವಾಗಿ ಎಚ್.ಕೆ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಜೂನ್ 10ರಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಪಕ್ಷದ ವಿವಿಧ ಸಂಘಟನೆಗಳ ಪ್ರತಿನಿಧಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.
ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ ಘಟಕ, ಅಲ್ಪಸಂಖ್ಯಾತರ ಘಟಕ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗಗಳ ಘಟಕ, ಸಾಮಾಜಿಕ ಜಾಲತಾಣ ವಿಭಾಗ, ರಾಜೀವ್ ಗಾಂಧಿ ಪಂಚಾಯತ್ ಸಂಘಟನೆ, ಮಾಜಿ ಸೈನಿಕರ ವಿಭಾಗ, ಕಾರ್ಮಿಕರ ವಿಭಾಗ, ಐಎನ್ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಹಾಗೂ ಖೇತ್ ಮಜದೂರ ವಿಭಾಗ, ವೈದ್ಯರ ಮತ್ತು ವೃತ್ತಿಪರ ವಿಭಾಗ, ಶಿಕ್ಷಕರ ಹಾಗೂ ಪದವಿಧರರ ವಿಭಾಗ, ಐಟಿ ಮತ್ತು ಡಾಟಾ ವಿಭಾಗ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪುರ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಪತ್ರಿಕಾ ಪ್ರಕಟಣೆ ಮೂಲಕ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.



