ವೈಜ್ಞಾನಿಕ ದತ್ತಾಂಶ ಸಂಗ್ರಹಣೆಗೆ ಸಿದ್ಧತೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಎಲ್ಲಾ ಕಾಲದಲ್ಲಿಯೂ, ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಮೀಸಲಾತಿಯ ಪ್ರಯೋಜನವು ಎಲ್ಲಾ ಜಾತಿಗಳಿಗೆ ಸಮಾನವಾಗಿ ತಲುಪುವಂತೆ ಮಾಡಲು ಪರಿಶಿಷ್ಟ ಜಾತಿಗಳ ವರ್ಗಿಕರಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆಯಿದೆ.

Advertisement

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4)ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿಗಳ ಒಳ ವರ್ಗಿಕರಣ ಮಾಡಬಹುದಾಗಿದೆ ಎಂದು ಪ್ರಕರಣದಲ್ಲಿ ದಿನಾಂಕ:01-08-2024ರಂದು ತೀರ್ಪು ನೀಡಿದೆ.

ಈ ನಿಟ್ಟಿನಲ್ಲಿ ಸರ್ಕಾರವು 2024ನೇ ಡಿಸೆಂಬರ್ 13ರಂದು ಸೂಕ್ತ ನಿಯಮ ಹಾಗೂ ಮಾರ್ಗಸೂಚಿಗಳನ್ನು ಸಹ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. 04-01-2025 ರಿಂದ 26-03-2025 ರವರೆಗೂ ಒಳಮೀಸಲಾತಿಯ ಬಗ್ಗೆ ಒಟ್ಟು 4034 ಅಹವಾಲುಗಳು/ಮನವಿ/ಸಲಹೆಗಳನ್ನು ಆಯೋಗವು ಸ್ವೀಕರಿಸಿದ್ದು, ಸದರಿ ಮನವಿ/ ಅಹವಾಲುಗಳನ್ನು ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ನ್ಯಾಯಮೂರ್ತಿ ಡಾ.ಹೆಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗವು 27-03-2025ರಂದು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಣೆಗೆ ಸಮೀಕ್ಷೆಯನ್ನು ನಡೆಸಲು ಶಿಫಾರಸ್ಸು ಮಾಡಿದೆ. ಅದರಂತೆ ವೈಜ್ಞಾನಿಕ ದತ್ತಾಂಶ ಸಂಗ್ರಹಣೆಗೆ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.

ಮೊಬೈಲ್ ಆ್ಯಪ್ ಹಾಗೂ ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ತಂತ್ರಾಂಶದಲ್ಲಿ ಮಾಹಿತಿ ಸಂಗ್ರಹಿಸುತ್ತಿರುವುದರಿಂದ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಬಹುದು. ಸಂಗ್ರಹಿಸಿರುವ ಮಾಹಿತಿಯನ್ನು ಅಧಿಕೃತವಾಗಿ ಪರಿಶೀಲಿಸಿ ಅಂತಿಮಗೊಳಿಸುವುದು. ವೈಜ್ಞಾನಿಕವಾದ ದತ್ತಾಂಶಗಳನ್ನು ಸಂಗ್ರಹಿಸಬಹುದು. ಈಗಾಗಲೇ ಇರುವ ದತ್ತಾಂಶಗಳನ್ನು ಬಳಸಿಕೊಂಡು ಸಮೀಕ್ಷೆಯನ್ನು ಕೈಗೊಳ್ಳಬಹುದು (ಕುಟುಂಬ, ಆಧಾರ್), ಕಡಿಮೆ ಕಾಲಾವಕಾಶ ತೆಗೆದು ಕೊಂಡು ಸಮಗ್ರ ಮಾಹಿತಿಯನ್ನು ಸಂಗ್ರಹಿಸಲಾಗುವುದು. ಸಂಗ್ರಹಿಸಿದ ಮಾಹಿತಿಯನ್ನು ವಿವಿಧ ಹಂತಗಳಲ್ಲಿ ಪರಿಶೀಲಿಸಿ ಪರೀಕ್ಷಿಸಿ ಅಂತಿಮಗೊಳಿಸಬಹುದು.

ಏಕಕಾಲದಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಿ, ನಿರ್ದಿಷ್ಟ ಕಾಲಮಿತಿಯಲ್ಲಿ ಪೂರ್ಣಗೊಳಿಸಬಹುದು. ಮಾಹಿತಿಯನ್ನು ಸಂಗ್ರಹಿಸಲು ನೇಮಿಸುವ ಮಾಹಿತಿ ಸಮೀಕ್ಷಾದಾರರಿಗೆ ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ವಾರ್ಡ್ ಮಟ್ಟದಲ್ಲಿ ತರಬೇತಿಗಳನ್ನು ಆಯೋಜಿಸಲಾಗುತ್ತದೆ.

ಈ ಸಮೀಕ್ಷೆಯ ಉದ್ದೇಶ, ಹಾಗೂ ಈ ತಂತ್ರಾಶವನ್ನು ಬಳಸುವ ವಿಧಾನವನ್ನು ಕುರಿತು ತರಬೇತಿ ನೀಡಿ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಮತ್ತು ಸಂಗ್ರಹಿಸಬೇಕಾದಂತಹ ಮಾಹಿತಿಯ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟು ಮಾಹಿತಿಯನ್ನು ಸಂಗ್ರಹಿಸಲು ತರಬೇತಿಯನ್ನು ನೀಡಲಾಗುತ್ತಿದೆ.

ಸಮೀಕ್ಷೆಗೆ ನೇಮಕವಾಗಿರುವ ಸುಮಾರು 65,000 ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸಮೀಕ್ಷೆಯ ಕುರಿತು ದಿನಾಂಕ: 02.05.2025 ಮತ್ತು 03.05.2025 ರಂದು ತಾಲ್ಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಲಾಗಿರುತ್ತದೆ. ಮತ್ತು ಎಲ್ಲಾ ಸಮೀಕ್ಷಾದಾರರಿಗೆ ಸಮೀಕ್ಷಾ ಕೈಪಿಡಿ ಮತ್ತು ಸಮೀಕ್ಷಾ ಕಿಟ್‌ಗಳನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ.

ಮೆಬೈಲ್ ಆ್ಯಪ್‌ನಲ್ಲಿರುವ ಸಮೀಕ್ಷಾ ಪ್ರಶ್ನಾವಳಿಯಲ್ಲಿ 42 ಪ್ರಶ್ನೆಗಳಿದ್ದು, ಇದರಲ್ಲಿ ಕೌಟುಂಬಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ವಿಷಯಗಳನ್ನೊಳಗೊಂಡಂತೆ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಮಾಹಿತಿಯು ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ವಿವಿಧ ಜಾತಿಗಳ ಸ್ಥಿತಿಗತಿ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಪ್ರಾತಿನಿದ್ಯತೆ ಬಗ್ಗೆ ದತ್ತಾಂಶವನ್ನು ನೀಡುತ್ತದೆ. ಇದರಿಂದಾಗಿ ವೈಜ್ಞಾನಿಕವಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ವರ್ಗಿಕರಣಕ್ಕಾಗಿ ಅನುಕೂಲವಾಗಲಿದೆ.

ರಾಜ್ಯ ಮಟ್ಟದ ಸಹಾಯವಾಣಿ ಸಂಖ್ಯೆ: 9481359000 ಈಗಾಗಲೇ ಚಾಲ್ತಿಯಲ್ಲಿರುತ್ತದೆ. ಇದಲ್ಲದೆ ಇತರೆ ಯಾವುದೇ ಸಂದೇಹಗಳಿದ್ದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ ಅಥವಾ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

05.05.2025ರಿಂದ 17.05.2025ರವರೆಗೆ ಮನೆ–ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. 19.05.2025ರಿಂದ 21.05.2025ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. 19.05.2025ರಿಂದ 23.05.2025ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಸಮೀಕ್ಷೆಗೆ ಸುಮಾರು 25 ಲಕ್ಷ ಪರಿಶಿಷ್ಟ ಜಾತಿ ಕುಟುಂಬಗಳು ಇರಬಹುದೆಂದು ಅಂದಾಜಿಸಲಾಗಿದೆ.


Spread the love

LEAVE A REPLY

Please enter your comment!
Please enter your name here