ಬೆಂಗಳೂರು: ಪೆನ್ ಡ್ರೈವ್ ವಿಚಾರವಾಗಿ ನಿಮ್ಮ ಮೇಲೆ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರು ಈಗ ಪ್ರೀತಂಗೌಡ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈಗ ಆ ವಿಚಾರ ಬೇಡ, ಆಮೇಲೆ ಮಾತನಾಡೋಣ. ಈಗ ಪಾದಯಾತ್ರೆ ಬಗ್ಗೆ ಚರ್ಚೆ ಮಾಡೋಣ. ನಾವು ಅವರ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು,
Advertisement
ಬಿಜೆಪಿ ಸರಕಾರದ ಕಾಲದ 30 ಹಗರಣಗಳಿವೆ. ದಿನಾ ಒಂದೊಂದು ಹಗರಣ ಬಿಚ್ಚಿಡುತ್ತೇವೆ. ಅವರ ಪಾದಯಾತ್ರೆ ಅಂತಿಮ ರೂಪುರೇಷೆ ಬಂದರೆ ನಾವು ನಮ್ಮ ಕಾರ್ಯಸೂಚಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು. ಕೇಂದ್ರ ಸರ್ಕಾರ ರಾಜಭವನದ ಮೂಲಕ ರಾಜ್ಯ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ಸಭೆ ಬಳಿಕ ನಾನು ಬಂದು ವಿವರಣೆ ನೀಡುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಿದೆ” ಎಂದು ತಿಳಿಸಿದರು.