ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಬಾರಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
ವಿಶಿಷ್ಟ ಸೇವಾ ಪದಕ
ಪೊಲೀಸ್ ಇಲಾಖೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿರುವ ಸಿಸಿಬಿಯ ಸಹಾಯಕ ಪೊಲೀಸ್ ಆಯುಕ್ತ (ACP) ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವ ದೊರೆತಿದೆ.
ಶ್ಲಾಘನೀಯ ಸೇವಾ ಪದಕ ಪುರಸ್ಕೃತರು
ರಾಜ್ಯದ ವಿವಿಧ ಪೊಲೀಸ್ ವಿಭಾಗಗಳು, ಕಮಿಷನರೇಟ್‌ಗಳು ಹಾಗೂ ಜಿಲ್ಲೆಗಳಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿರುವ 16 ಅಧಿಕಾರಿ ಮತ್ತು ಸಿಬ್ಬಂದಿಗೆ ‘ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ’ ಘೋಷಿಸಲಾಗಿದೆ.
- ಸಾರಾ ಫಾತಿಮಾ – ಎಸ್‌ಪಿ, ರೈಲ್ವೇಸ್, ಬೆಂಗಳೂರು
- ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆಎಸ್‌ಆರ್‌ಪಿ
- ಮಹಾದೇವ್ – ಎಸಿಪಿ, ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು
- ಪರಮಾನಂದ್ – ಡಿವೈಎಸ್‌ಪಿ, ಡಿಎಆರ್, ರಾಯಚೂರು
- ಷಣ್ಮುಗವರ್ಮಾ – ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು
- ಭಾವುದ್ದೀನ್ ರುಕ್ಮುದ್ದೀನ್ – ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ
- ಗುರುಪ್ರಸಾದ್ ಗೋಪಾಲ್ ನಾಯಕ್ – ಇನ್ಸ್‌ಪೆಕ್ಟರ್, ಸಿಐಡಿ
- ನಯೀಂ – ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್, ರಾಜಭವನ
- ಶ್ರೀನಿವಾಸ – ಪಿಎಸ್‌ಐ, ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು
- ಜ್ಞಾನದೇವ್ ನವಲ ತರಾಸೆ – ಎಆರ್‌ಎಸ್‌ಐ, ಕೆಎಸ್‌ಆರ್‌ಪಿ
- ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತೆ
- ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿಸಿಆರ್‌ಇ, ಕೆಜಿಎಫ್
- ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆಎಸ್‌ಆರ್‌ಪಿ
- ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಠಾಣೆ
- ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ
- ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಠಾಣೆ
ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಹಾಗೂ ಶ್ಲಾಘನೀಯ ಸೇವೆಯನ್ನು ಗುರುತಿಸಿ ನೀಡಲಾಗುತ್ತಿರುವ ಈ ಗೌರವಕ್ಕೆ ಭಾಜನರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕರ್ನಾಟಕ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ.

