ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸಲು 1994ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಯೋಜನೆಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಗತಿ ಕಂಡು ಬಂದಿದೆ. ಅಂಗವಿಕಲತೆಯೊಂದಿಗೆ ದಿಗೆ ಭೀಕರ ಪರಿಣಾಮಗಳನ್ನು ಬೀರಬಹುದಾದ ಈ ಮಾರಕ ರೋಗವನ್ನು ತಡೆಗಟ್ಟಲು ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ತಹಸೀಲ್ದಾರ ಕೆ.ರಾಘವೇಂದ್ರ ರಾವ್ ಹೇಳಿದರು.
ಅವರು ರವಿವಾರ ಶಿರಹಟ್ಟಿಯ ತಾಲ್ಲೂಕಾ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೋಲಿಯೋ ದಿನದ ಅಂಗವಾಗಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ಹಾಕಿಸಿಕೊಳ್ಳಬೇಕು. ಅಭಿಯಾನವನ್ನು ಯಶಸ್ವಿಗೊಳಿಸಲು ಸಾಕಷ್ಟು ಸಿದ್ಧತೆಗಳನ್ನು ಮಾಡಲಾಗಿದ್ದು, ಮಕ್ಕಳನ್ನು ಪೋಲಿಯೋದಿಂದ ರಕ್ಷಿಸುವುದಕ್ಕಾಗಿ ನಿರ್ಮಿಸಲಾದ ಬೂತ್ಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕಾ ಆರೋಗ್ಯಾಧಿಕಾರಿ ಡಾ. ಸುಭಾಸ ದೈಗೊಂಡ, ಡಾ. ಪವನ ಫಾಯದೆ, ಹುರುಳಿಕುಪ್ಪಿ ಮುಂತಾದವರು ಉಪಸ್ಥಿತರಿದ್ದರು.



