ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೆಂಗಳೂರಿನ HAL ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ.
Advertisement
ಇನ್ನು ಸಿಲಿಕಾನ್ ಸಿಟಿಗೆ ಬಂದಿಳಿದ ಮೋದಿಯನ್ನು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ಸುಧಾಕರ್ ರೆಡ್ಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ.ಶೈಲೇಂದ್ರ ಬೆಲ್ದಾಳೆ, ಸುರೇಶ್ ಗೌಡ, ಎಂಎಲ್ಸಿ ಮಾರುತಿರಾವ್ ಮುಳೆ ಸೇರಿದಂತೆ 15 ಜನರು ಸ್ವಾಗತ ಮಾಡಿದ್ದಾರೆ.