ಬೆಂಗಳೂರು: ಸಿಲಿಕಾನ್ ಸಿಟಿ ಜನರ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಆರ್.ವಿ. ರೋಡ್ನಿಂದ ಬೊಮ್ಮಸಂದ್ರವರೆಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ.
ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಸಂಸದರಾದ ಡಾ. ಸಿ.ಎನ್. ಮಂಜುನಾಥ್,
ತೇಜಸ್ವಿ ಸೂರ್ಯ ಹಾಗೂ ಸರ್ಕಾರದ ಸಿಎಸ್ ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಹೊಸ ಹಳದಿ ಮಾರ್ಗ ಆರಂಭದೊಂದಿಗೆ ಬೆಂಗಳೂರು ಮೆಟ್ರೋ ಜಾಲ ಇನ್ನಷ್ಟು ವಿಸ್ತರಿಸಿದ್ದು, ದಕ್ಷಿಣ ಭಾಗದ ಪ್ರಯಾಣಿಕರಿಗೆ ವೇಗವಾದ ಹಾಗೂ ಸುಗಮ ಸಾರಿಗೆ ಸೌಲಭ್ಯ ಒದಗಲಿದೆ.



